Karnataka COVID-19 Updates
15.7K subscribers
9.95K photos
238 videos
3.61K files
735 links
For latest updates related to COVID-19 in Karnataka.

Note: channel is entirely handled by the same old citizen volunteers team.
Download Telegram
ನಾಡಿನ ಜನತೆಗೆ ಮನವಿ

ಕಳೆದ ಕೆಲವು ದಿನಗಳಲ್ಲಿ ಕೋವಿಡ್19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ. ಮನೆಯಲ್ಲೇ ಇದ್ದು, ಸುರಕ್ಷಿತವಾಗಿರುವುದು ಹಾಗೂ ಸೋಂಕು ಹರಡುವ ಸರಪಳಿಯನ್ನು ತುಂಡರಿಸುವುದು ಪ್ರಧಾನಮಂತ್ರಿಯವರು ಘೋಷಿಸಿದ ಲಾಕ್ ಡೌನ್ ನ ಆಶಯವಾಗಿತ್ತು. ನಾಗರಿಕರು ಲಾಕ್ ಡೌನನ್ನು ಕಟ್ಟುನಿಟ್ಟಾಗಿ ಪಾಲಿಸದಿರುವ ಬಗ್ಗೆ ದೂರುಗಳು ಬರುತ್ತಿವೆ. ಲಾಕ್ ಡೌನ್ ಸಡಿಲಗೊಳಿಸುವ ಕೀಲಿಕೈ ನಿಮ್ಮ ಬಳಿಯೇ ಇದೆ ಎಂಬುದನ್ನು ಮರೆಯದಿರಿ. ಬಂಧುಗಳೆ, ಚೆಂಡು ನಿಮ್ಮ ಅಂಗಳದಲ್ಲಿದೆ. ಲಾಕ್ ಡೌನನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೊನ ವೈರಸ್ ಹರಡುವಿಕೆ ತಡೆಗಟ್ಟಲು ನಿಮ್ಮಿಂದ ಮಾತ್ರ ಸಾಧ್ಯ. ಅನಗತ್ಯವಾಗಿ ಓಡಾಡಿ, ನಿಮ್ಮ ಹಾಗೂ ಇತರರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಬೇಡಿ. ಕೋವಿಡ್19 ತಡೆಗಟ್ಟಲು ನಾವೆಲ್ಲರೂ ಸಾಮೂಹಿಕವಾಗಿ ನಮ್ಮ ಹೊಣೆಗಾರಿಕೆಯನ್ನು ನಿಭಾಯಿಸೋಣ. ಮನೆಯಲ್ಲೇ ಇರಿ. ಸುರಕ್ಷಿತವಾಗಿರಿ. @BSYBJP #9pm9minutes #KarnatakaFightsCorona #IndiaFightsCorona #SaluteCOVIDFighters
CM of Karnataka: ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನೀಡಿದ ಕರೆಯಂತೆ, ಕತ್ತಲಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಸಂಕೇತವಾದ ದೀಪವನ್ನು ಮುಖ್ಯಮಂತ್ರಿ ಶ್ರೀ @BSYBJP ಅವರು ತಮ್ಮ ಕಾವೇರಿ ನಿವಾಸದಲ್ಲಿ ಕುಟುಂಬದ ಸದಸ್ಯರೊಡನೆ 9 ಗಂಟೆಗೆ ಸರಿಯಾಗಿ 9 ನಿಮಿಷಗಳ ಕಾಲ ಬೆಳಗಿಸಿದರು. #KarnatakaFightsCorona #IndiaFightsCorona #SaluteCOVIDFighters